ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಏಪ್ರಿಲ್ 2 ರಂದು ಚಾಲನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಏಪ್ರಿಲ್ 2 ರಂದು ಚಾಲನೆ

ದಾವಣಗೆರೆ, ಮಾ.30- ಸ್ವಾತಂತ್ರ್ಯೋತ್ಸ ವದ ಅಮೃತ ಮಹೋತ್ಸವದ ಅಂಗವಾಗಿ ದೇಶಾದ್ಯಂತ 75 ವಾರಗಳ ಕಾಲ ನಿರಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ನಗರ ಪಾಲಿಕೆ ಆವರಣದಲ್ಲಿ ಏಪ್ರಿಲ್ 2 ರಂದು ಸ್ವಾತಂತ್ರ್ಯದ ಸಂದೇಶ ಸಾರುವ ಅರ್ಥಪೂರ್ಣ ಕಾರ್ಯಕ್ರಮದೊಂದಿಗೆ ಅಮೃತ ಮಹೋ ತ್ಸವಕ್ಕೆ ಚಾಲನೆ ನೀಡಲಾಗುವುದು ಎಂದು ಡಿಸಿ  ಮಹಾಂತೇಶ ಬೀಳಗಿ ಹೇಳಿದರು.

ಸೋಮವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಜಾದಿ ಕಿ ಅಮೃತ ಮಹೋತ್ಸವವನ್ನು ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಆಚರಿಸುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಏಪ್ರಿಲ್ 2 ರಂದು ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಜಿಲ್ಲಾ ಕೇಂದ್ರ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಚಾಲನೆ ನೀಡಲಾ ಗುವುದು. ಅಂದು ನಗರದ ಜಿಲ್ಲಾಧಿಕಾರಿ ಕಚೇರಿಯಿಂದ ಅಧಿಕಾರಿಗಳನ್ನೊಳಗೊಂಡಂತೆ ಸುಮಾರು 75 ಸೈಕಲ್‍ಗಳಲ್ಲಿ ಸೈಕಲ್ ಜಾಥಾ ನಡೆಸಲಾಗುವುದು ಎಂದರು.

ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ವಿವಿಧ ಕನ್ನಡಪರ ಸಂಘಟನೆಗಳು, ರೋಟರಿ, ಲಯನ್ಸ್, ಸ್ಕೌಟ್ಸ್, ಗೈಡ್ಸ್, ಎನ್‍ಎಸ್‍ಎಸ್, ಎನ್‍ಸಿಸಿ ಸೇರಿದಂತೆ ಸಂಘಟನೆಗಳ ಸಹಯೋಗದಲ್ಲಿ ಸ್ವಚ್ಛತೆ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಕೋವಿಡ್ ಹಿನ್ನೆಲೆಯಲ್ಲಿ ಹೆಚ್ಚು ಜನರನ್ನು ಸೇರಿಸದೆ ಅರ್ಥಪೂರ್ಣವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ಜಿ.ಪಂ ಸಿಇಒ ಡಾ.ವಿಜಯ ಮಹಾಂತೇಶ ದಾನಮ್ಮನವರ್ ಮಾತನಾಡಿ, ಕಳೆದ ಸಾಲಿನಲ್ಲಿ ನಮ್ಮ ಜಿಲ್ಲಾ ಪಂಚಾಯ್ತಿಗೆ ಅತ್ಯುತ್ತಮ ಜಿಲ್ಲಾ ಪಂಚಾಯಿತಿ ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ, ಆಜಾದಿ ಕಿ ಅಮೃತ ಮಹೋತ್ಸವ ಸಂದರ್ಭ ದಲ್ಲಿ ಜಿಲ್ಲೆಯಲ್ಲಿ 75 ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ನೀಡಲಾಗಿದ್ದು, ಗ್ರಾ.ಪಂ, ತಾ.ಪಂ ಮಟ್ಟದಲ್ಲೂ ನಿರಂತರವಾಗಿ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ನಜ್ಮಾ, ಡಿಡಿಪಿಐ ಪರಮೇಶ್ವರಪ್ಪ, ಹರಿಹರ ತಹಶೀಲ್ದಾರ್ ರಾಮಚಂದ್ರಪ್ಪ, ಕ್ರೀಡಾ ಮತ್ತು ಯುವಸಬಲೀ ಕರಣ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್, ಕನ್ನಡ ಮತ್ತು ಸಂಸ್ಕೃತಿ ಇಲಾ ಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ವಾರ್ತಾಧಿಕಾರಿ ಡಿ.ಅಶೋಕ್ ಕುಮಾರ್ ಹಾಗೂ ಇತರೆ ಅಧಿಕಾರಿಗಳು ಇದ್ದರು.

Leave a Reply

Your email address will not be published.