ಹರಪನಹಳ್ಳಿ : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಶುರುವಾಗಿರುವ ಹಿನ್ನೆಲೆಯಲ್ಲಿ ಪಟ್ಟಣದ ಪುರಸಭೆಯಿಂದ ಕೋವಿಡ್ ಲಸಿಕೆ ಹಾಗೂ ಮಾಸ್ಕ್ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ
ದಾವಣಗೆರೆ, ಏ.5- ಧೂಳೇಹೊಳೆ ಗ್ರಾಮದ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿ ಸಮವಸ್ತ್ರ ವಿತರಿಸಲಾಯಿತು. ಸಮೂಹ ಸಂಪನ್ಮೂಲ ವ್ಯಕ್ತಿ ಮಂಜುನಾಥ್, ಮುಖ್ಯ ಶಿಕ್ಷಕ ಬಸವರಾಜಪ್ಪ, ಗ್ರಾ.ಪಂ. ಸದಸ್ಯ ಚನ್ನಯ್ಯ ಸ್ವಾಮಿ, ಶಾಲಾ ಶಿಕ್ಷಕರು ಈ ವೇಳೆ ಹಾಜರಿದ್ದರು.
ಭುವನೇಶ್ವರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಪ್ರೇಮಿಯ ಹುಟ್ಟುಹಬ್ಬ
ರಾಣೇಬೆನ್ನೂರು : ನಗರದ ವಿವೇಕಾನಂದ ಗ್ರಾಮೀಣ ವಿದ್ಯಾಸಂಸ್ಥೆ ಅಧ್ಯಕ್ಷರು ಮತ್ತು ಹಾವೇರಿ ಜಿಲ್ಲೆಯ ಸಾವಿತ್ರ ಬಾ ಪುಲೆ ಎಂದೇ ಹೆಸರಾದ ಶಿಕ್ಷಣ ಪ್ರೇಮಿ, ಪಿಂಚಣಿ ಹಣದಲ್ಲಿ ಭುವನೇಶ್ವರಿ ಆದರ್ಶ ಹಿರಿಯ ಪ್ರಾಥಮಿಕ ಶಾಲೆ ಸ್ಥಾಪಿಸಿ ಬಡ ವಿದ್ಯಾರ್ಥಿಗಳ ಪಾಲಿಗೆ ಬೆಳಕಾದ ಪುಟ್ಟಮ್ಮ ಬಸಯ್ಯ ಹಿರೇಮಠ ಅವರ ಹುಟ್ಟಿದ ಹಬ್ಬ ಆಚರಿಸಲಾಯಿತು.
15, 16, 22ನೇ ವಾರ್ಡುಗಳಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ
ಬಿಜೆಪಿ ಸಂಸ್ಥಾಪನ ದಿನವಾದ ಇಂದು ಪಕ್ಷದ ಆದೇಶದ ಮೇರೆಗೆ ಮಹಾ ಶಕ್ತಿ ಕೇಂದ್ರದಲ್ಲಿ ಪಕ್ಷದ ಧ್ವಜಾಹರೋಹಣ 15, 16 ಮತ್ತು 22 ನೇ ವಾರ್ಡ್ ನ ಪ್ರಮುಖರ ಮತ್ತು ಕಾರ್ಯಕರ್ತರ ಸಭೆ ನಡೆಯಿತು.
ಬಿಜೆಪಿ ಸಂಸ್ಥಾಪನಾ ದಿನಾಚರಣೆ
ಹರಿಹರ : ಭಾರತೀಯ ಜನತಾ ಪಕ್ಷ ಸ್ಥಾಪನೆಯಾಗಿ ಇಂದಿಗೆ 40 ವರ್ಷಗಳು ಪೂರೈಸಿದೆ. ಭಾರತದಲ್ಲಿ ಸ್ವಾತಂತ್ರ್ಯ ನಂತರ ಅಸ್ತಿತ್ವಕ್ಕೆ ಬಂದಿರುವ ಯಾವ ಪಕ್ಷಗಳೂ ಇಷ್ಟು ಕಡಿಮೆ ಅವಧಿಯಲ್ಲಿ ವ್ಯಾಪಕವಾಗಿ ಬೆಳೆದಿಲ್ಲ.
ಎಂ.ಪಿ.ಆರ್ ಜಾತ್ಯತೀತ, ಸಮಾಜವಾದಿ ನಾಯಕ
ಹರಪನಹಳ್ಳಿ : ಎಂ.ಪಿ. ರವೀಂದ್ರ ಜಾತ್ಯತೀತ, ಸಮಾಜವಾದಿ ನಾಯಕ ದಿ|| ಎಂ.ಪಿ. ಪ್ರಕಾಶ್ರಂತಹ ಸೃಜನಶೀಲ ರಾಜಕಾರಣಿ ಮತ್ತು ಧೀಮಂತ ನಾಯಕನ ಅವಶ್ಯಕತೆ ಈ ತಾಲ್ಲೂಕಿಗೆ ಬೇಕಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.
ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಎಸ್4 ನಿಂದ ಸಿಎಂ ಗೆ ಮನವಿ
ಹರಿಹರ : ಒಳಮೀಸಲಾತಿ ವರ್ಗೀಕರಣ ಮಾಡುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ತಾಲ್ಲೂಕಿನ ಡಿಎಸ್4 ಕರ್ನಾಟಕ ತಾಲ್ಲೂಕು ಸಮಿತಿ ಅಧ್ಯಕ್ಷ ಎಂ. ಮಂಜುನಾಥ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು.
ಪರಿಶ್ರಮದಿಂದ ಜೀವನದಲ್ಲಿ ಯಶಸ್ಸು ಸಾಧ್ಯ
ಜೀವನದಲ್ಲಿ ಯಶಸ್ಸು ಸಾಧಿಸಲು ಪರಿಶ್ರಮ ಮುಖ್ಯ. ವಿಜ್ಞಾನಕ್ಕಿಂತ ಕಲೆ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ತ್ವರಿತ ಗತಿಯಲ್ಲಿ ಯಶಸ್ಸು ಗಳಿಸಲು ಸಾಧ್ಯವಿದೆ ಎಂದು ಬಿ.ಎಸ್.ಸಿ. ಪ್ರಥಮ ದರ್ಜೆ ಕಾಲೇಜಿನ ಅಧ್ಯಕ್ಷ ಬಿ.ಸಿ. ಶಿವಕುಮಾರ್ ಅಭಿಪ್ರಾಯಪಟ್ಟರು.
ಅಂಚೆ ಕಾರ್ಡಿನಲ್ಲಿ ಚಿತ್ರ ಬರೆಯುವ ಸ್ಪರ್ಧೆ
ನಗರದ ಶ್ರೀ ಜಗದ್ಗುರು ಜಯದೇವ ಮುರುಘರಾಜೇಂದ್ರ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪೋಸ್ಟ್ ಕಾರ್ಡಿನಲ್ಲಿ ವಿಜ್ಞಾನ ಚಿತ್ರ ಚಿತ್ರಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಹರಿಹರ : ಹಾಲು, ಹಣ್ಣು ವಿತರಣೆ
ಹರಿಹರ : ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜ ಸಂಘದಿಂದ ಲಿಂಗೈಕ್ಯ ಜಗದ್ಗುರು ಶ್ರೀ ಪುಣ್ಯಾನಂದಪುರಿ ಮಹಾಸ್ವಾಮೀಜಿ ಅವರ 14ನೇ ವರ್ಷದ ಪುಣ್ಯಾರಾಧನೆ ಅಂಗವಾಗಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಿಸಲಾಯಿತು.